ಉಡುಪಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಲ್ಲಿ ಮಟ್ಕಾ ಜುಗಾರಿ ವಿರುದ್ಧ ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಓರ್ವ ಮಟ್ಕಾ ಬುಕ್ಕಿಯನ್ನೂ ವಶಕ್ಕೆ ಪಡೆದಿದ್ದಾರೆ. ಕಾರ್ಕಳ ಹಾಗೂ ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಾರ್ವಜನಿಕರಿಂದ ಮಟ್ಕಾ ಜುಗಾರಿ ಹೆಸರಿನಲ್ಲಿ ಹಣ ಸಂಗ್ರಹಿಸುತ್ತಿದ್ದ ಆರೋಪಿಗಳನ್ನು ಬಂಧಿಸಿ, ನಗದು, ಮೊಬೈಲ್, ಮಟ್ಕಾ ಚೀಟಿಗಳು ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಉಡುಪಿ ಶಿವಳ್ಳಿ ಗ್ರಾಮದ ಮಟ್ಕಾ ಬುಕ್ಕಿ ಲಿಯೋ ಕರ್ನೆಲಿಯೋನನ್ನೂ ಪೊಲೀಸರು ಬಂಧಿಸಿದ್ದು, ಪ್ರಕರಣಗಳ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
Check Also
ದೇರಳಕಟ್ಟೆ: ಮೆಡಿಕಲ್ ಕಾಲೇಜಿನಲ್ಲಿ Ragging ಪ್ರಕರಣ ದಾಖಲು
ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …
bigtvnews | Hubli Dharwad News | Kannada News | Karnataka News Hubli News | News In Hubli | Local news

