ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಬೆಳ್ಳಾಲ ಗ್ರಾಮದಲ್ಲಿ ತಾಯಿ ಬೈದಿದ್ದಕ್ಕೆ ಮನನೊಂದ 18 ವರ್ಷದ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿನಿ ಪ್ರಮಿತಾ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಹೋದರಿಯರ ನಡುವೆ ಬಟ್ಟೆ ಇಡುವ ವಿಚಾರಕ್ಕೆ ಜಗಳ ನಡೆದಿದ್ದು, ತಾಯಿ ಇಬ್ಬರನ್ನೂ ಬೈದ ಬಳಿಕ ಪ್ರಮಿತಾ ಕೋಣೆಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಳು. ಬಳಿಕ ಆಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ತಾಯಿ ನೀಡಿದ ದೂರಿನ ಮೇರೆಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಾನಸಿಕ ಒತ್ತಡ ಅಥವಾ ಆತ್ಮಹತ್ಯೆಯ ಆಲೋಚನೆಗಳಿದ್ದರೆ ತಕ್ಷಣ 104 ಸಹಾಯವಾಣಿ ಅಥವಾ ಮಾನಸಿಕ ಆರೋಗ್ಯ ತಜ್ಞರನ್ನು ಸಂಪರ್ಕಿಸಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

