Breaking News

ರೀಲ್ಸ್ ನೋಡಿ ಐತಿಹಾಸಿಕ ದೇವಸ್ಥಾನದಲ್ಲಿ ಕಳ್ಳತನ: ಗುಜರಾತ್ ಮೂಲದ ಗ್ಯಾಂಗ್ ಅರೆಸ್ಟ್

ವಿಜಯಪುರ: ಮುದ್ದೇಬಿಹಾಳ ತಾಲೂಕಿನ ಬಸರಕೋಡ ಗ್ರಾಮದ ಬಸವೇಶ್ವರ ದೇವಸ್ಥಾನದಲ್ಲಿ ನಡೆದಿದ್ದ 32 ಕೆಜಿ ಬೆಳ್ಳಿ ಬಸವಣ್ಣನ ಮೂರ್ತಿ ಕಳ್ಳತನ ಪ್ರಕರಣವನ್ನು ಪೊಲೀಸರು ಒಂದು ತಿಂಗಳ ಬಳಿಕ ಭೇದಿಸಿದ್ದಾರೆ. ಗುಜರಾತ್ ಮೂಲದ ಸುರೇಶಕುಮಾರ್ ಸೋನಿ (51), ಬ್ರಹ್ಮಾರ್ ನೇಟ್ (35) ಹಾಗೂ ಇಂದ್ರಜೀತ್ ನೇಟ್ (33) ಬಂಧಿತರಾಗಿದ್ದಾರೆ. ಯೂಟ್ಯೂಬ್ ಹಾಗೂ ಇನ್‌ಸ್ಟಾಗ್ರಾಮ್ ರೀಲ್ಸ್‌ಗಳ ಮೂಲಕ ದೇವಸ್ಥಾನದ ಮಾಹಿತಿ ಪಡೆದು, ಜುಲೈ 6ರಂದು ಗುಜರಾತ್‌ನಿಂದ ಕಾರಿನಲ್ಲಿ ಬಂದು ಕಳ್ಳತನ ಎಸಗಿದ್ದರೆಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಕದ್ದ ಮೂರ್ತಿಯನ್ನು ಕರಗಿಸಿ ಬೆಳ್ಳಿ ಗಟ್ಟಿಗಳನ್ನಾಗಿ ಮಾಡಿದ್ದ ಆರೋಪಿಗಳಿಂದ 23 ಕೆಜಿ ಬೆಳ್ಳಿ ಗಟ್ಟಿಗಳು, 4 ಕೆಜಿ ಮೂರ್ತಿಯ ತುಂಡುಗಳು, ₹67 ಸಾವಿರ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರು ಸೇರಿದಂತೆ ₹52.70 ಲಕ್ಷ ಮೌಲ್ಯದ ಸ್ವತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *