Breaking News

ಬಳ್ಳಾರಿಯಲ್ಲಿ ಘೋರ ದುರಂತ, ಲಾರಿ ಪಲ್ಟಿಯಾಗಿ ಇಬ್ಬರು ಯುವಕರ ಸಾವು!

ಬಳ್ಳಾರಿ: ಸಂಡೂರು ತಾಲೂಕಿನ ವೆಂಕಟಗಿರಿ ಗ್ರಾಮದ ಬಳಿ ಗಣಿ ಲಾರಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದ ಪರಿಣಾಮ ಕುಮಾರ್ (34) ಹಾಗೂ ಮಂಜುನಾಥ್ (28) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದ್ದು, ಸಂಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಂದೆಡೆ, ಶಿವಮೊಗ್ಗದ ಚೋರಡಿ ಸೇತುವೆ ಬಳಿ ಕಾರು ಮೂರು ಬಾರಿ ಪಲ್ಟಿಯಾದರೂ, ಅದರಲ್ಲಿದ್ದ ಆರು ಮಂದಿ ಸ್ನೇಹಿತರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ಜಗಳ; ಚಿಕ್ಕಪ್ಪನಿಗೆ ಚಾಕು ಇರಿತ!

ಶಿವಮೊಗ್ಗ ತಾಲೂಕಿನ ಪುರದಾಳು ಗ್ರಾಮದಲ್ಲಿ ಜಮೀನಿನ ಗಡಿ ಹಾಗೂ ಅಡಿಕೆ ತೋಟಕ್ಕೆ ನೀರು ಹಾಯಿಸುವ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಯುವಕನೊಬ್ಬ …

Leave a Reply

Your email address will not be published. Required fields are marked *