Breaking News

ಮಂಗಳೂರು | ವೃದ್ಧೆ ಮೇಲೆ ಹಲ್ಲೆ ನಡೆಸಿ ಆಭರಣ ಕಳವು: ಆರೋಪಿಗಳ ಬಂಧನ

ಮಂಗಳೂರು: ಮನೆಗೆ ನುಗ್ಗಿ 76 ವರ್ಷದ ವೃದ್ಧೆಯ ಮೇಲೆ ಹಲ್ಲೆ ನಡೆಸಿ ಸುಮಾರು ₹3 ಲಕ್ಷ ಮೌಲ್ಯದ 24 ಗ್ರಾಂ ಚಿನ್ನಾಭರಣ ದೋಚಿದ್ದ ಇಬ್ಬರು ಆರೋಪಿಗಳನ್ನು ಕೊಣಾಜೆ ಪೊಲೀಸರು ಕೇವಲ ಮೂರು ದಿನಗಳಲ್ಲಿ ಬಂಧಿಸಿದ್ದಾರೆ. ಆ.3ರಂದು ಬಾಡಿಗೆ ಮನೆ ಕೇಳುವ ನೆಪದಲ್ಲಿ ಮನೆಗೆ ಪ್ರವೇಶಿಸಿದ ಆರೋಪಿಗಳು, ವೃದ್ಧೆಯ ಮೇಲೆ ಹಲ್ಲೆ ನಡೆಸಿ ಅವರು ಧರಿಸಿದ್ದ ಚಿನ್ನದ ಸರ ಹಾಗೂ ಬಳೆಯನ್ನು ಕಿತ್ತು ಪರಾರಿಯಾಗಿದ್ದರು. ಪ್ರಕರಣದ ತನಿಖೆಗೆ ರಚಿಸಿದ್ದ ವಿಶೇಷ ತಂಡ ಶುಕ್ರವಾರ ಇಬ್ಬರನ್ನು ಬಂಧಿಸಿ, ಕಳವು ಮಾಡಿದ ಆಭರಣ ಹಾಗೂ ಕೃತ್ಯಕ್ಕೆ ಬಳಸಿದ ಬೈಕ್‌ನ್ನು ವಶಪಡಿಸಿಕೊಂಡಿದೆ. ಬಂಧಿತರಲ್ಲಿ ಒಬ್ಬನ ವಿರುದ್ಧ ಈಗಾಗಲೇ ಹಲವು ಸುಲಿಗೆ ಹಾಗೂ ಕಳವು ಪ್ರಕರಣಗಳು ದಾಖಲಾಗಿದ್ದು, ಪ್ರಕರಣದ ಕುರಿತು ಕೊಣಾಜೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *