Breaking News

ಪೊಲೀಸರ ವಿರುದ್ಧ ಅವಹೇಳನಕಾರಿ ಹೇಳಿಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು

ಮಂಡ್ಯ: ಸಾಮಾಜಿಕ ಜಾಲತಾಣಗಳಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕುರಿತು ಆಧಾರರಹಿತ ಹಾಗೂ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೊ ಪೋಸ್ಟ್ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಮಂಡ್ಯ ಪೊಲೀಸರು ಹೇಳಿದ್ದಾರೆ. ಬಾಂಗ್ಲಾದ ಪ್ರಜೆಗಳನ್ನು ನಾನು ಬೆಂಗಳೂರಿಗೆ ಕಳುಹಿಸಿರುವೆ, ಪೊಲೀಸರ ಕೈಯಲ್ಲಿ ಅವರನ್ನು ಹಿಡಿಯಲು ಸಾಧ್ಯವಿಲ್ಲ ಎಂದು ಪೊಲೀಸ್ ಇಲಾಖೆಯ ಕುರಿತು ಆಧಾರರಹಿತ ಹಾಗೂ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೊ ಪೋಸ್ಟ್ ಹಂಚಿಕೊಂಡಿದ್ದ. ಈ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದಿರುವ ಮಂಡ್ಯ ಪೊಲೀಸರು, ನಂತರ ಆ ವ್ಯಕ್ತಿಯು ತನ್ನ ತಪ್ಪನ್ನು ಅರಿತು ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾನೆ ಎಂದು ತಿಳಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ, ಸಂದೇಶಗಳನ್ನು ಸಾರ್ವಜನಿಕರು ನಂಬಬಾರದು ಎಂದು ಪೊಲೀಸರು ಮನವಿ ಮಾಡಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *