ಉಡುಪಿ: ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉತ್ತರ ಪ್ರದೇಶ ಮೂಲದ ಶೂಟರ್ ರಾಜು ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಬೈಂದೂರು ತಾಲೂಕಿನ ಒತ್ತಿನಣೆ ಪ್ರದೇಶದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರಾಜು ಬಲಗಾಲಿಗೆ ಗುಂಡೇಟು ತಗುಲಿದೆ. ಮೂವರು ಆರೋಪಿಗಳನ್ನು ಬಂಧಿಸಲು ತೆರಳಿದ್ದ ಪೊಲೀಸರ ಮೇಲೆ ಆರೋಪಿಗಳು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದಾರೆ. ಈ ವೇಳೆ ಎಸ್ಐ ತೇಜಸ್ವಿ ಮತ್ತು ಪ್ರಸನ್ನ ನೇತೃತ್ವದ ತಂಡ ಆತ್ಮರಕ್ಷಣೆಗಾಗಿ ಫೈರಿಂಗ್ ನಡೆಸಿದೆ. ಗಾಯಗೊಂಡ ರಾಜುವನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡ ಎಸ್ಐ ತೇಜಸ್ವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಪರಾರಿಯಾದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

