Breaking News

ಮಡಿಕೇರಿ | ಮೊಮ್ಮಗಳ ಮೇಲೆ ಅತ್ಯಾಚಾರ: ತಾತನಿಗೆ 20 ವರ್ಷ ಜೈಲು ಶಿಕ್ಷೆ

ಮಡಿಕೇರಿ: 15 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ್ದ 60 ವರ್ಷದ ಅಪರಾಧಿಗೆ ಮಡಿಕೇರಿಯ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷೆನ್ಸ್ ನ್ಯಾಯಾಲಯ 20 ವರ್ಷ ಕಠಿಣ ಶಿಕ್ಷೆ ವಿಧಿಸಿದೆ. ಬಾಲಕಿಯ ತಂದೆ, ತಾಯಿ ಮೃತಪಟ್ಟ ಬಳಿಕ ಆಕೆಯನ್ನು ಮಲತಂದೆ ಮಕ್ಕಳ ಗೃಹದಲ್ಲಿ ಬಿಟ್ಟು ಹೋಗಿದ್ದರು. ಬಳಿಕ ಬಾಲಕಿಯನ್ನು ನೋಡಿಕೊಳ್ಳುವುದಾಗಿ ಹೇಳಿ ಮನೆಗೆ ಕರೆದೊಯ್ದಿದ್ದ ತಾತ, 2024ರ ನವೆಂಬರ್‌ನಿಂದ 2025ರ ಮಾರ್ಚ್‌ವರೆಗೆ ಅತ್ಯಾಚಾರ ಎಸಗಿದ್ದಾನೆ. ಈ ವಿಚಾರವನ್ನು ಬಾಲಕಿ ಶಿಕ್ಷಕಿಗೆ ತಿಳಿಸಿದ್ದು, ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ ₹20 ಸಾವಿರ ದಂಡ ವಿಧಿಸಿದೆ. ಜೊತೆಗೆ ಬಾಲಕಿಗೆ ₹9 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *