Breaking News

ಐಟಿ ಉದ್ಯೋಗಿಗಳ ಮೇಲೆ ಬ್ಯಾಟ್‌ನಿಂದ ಹಲ್ಲೆ – ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿದ ಟೆಕಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಇಬ್ಬರು ಐಟಿ ಉದ್ಯೋಗಿಗಳ ಮೇಲೆ ವ್ಯಕ್ತಿಯೊಬ್ಬ ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿದ ಘಟನೆ ನಡೆದಿದೆ. ಸಂತ್ರಸ್ತರಾದ ಸಂದೀಪ್ ಮತ್ತು ಪ್ರಶಾಂತ್ ರಸ್ತೆಯಲ್ಲಿ ತೆರಳುತ್ತಿದ್ದಾಗ ಆರೋಪಿ ಅರುಣ್ ಎಸ್‌ಯುವಿ ನಿಲ್ಲಿಸಿ ಅವರನ್ನು ತಡೆದು, ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿದ್ದಾನೆ. ಇಬ್ಬರೂ ತಾವು ಭಾರತೀಯರು ಎಂದು ಉತ್ತರಿಸಿದರೂ, ಆರೋಪಿ ಐಡಿ ಕಾರ್ಡ್ ತೋರಿಸುವಂತೆ ಒತ್ತಾಯಿಸಿದ್ದಾನೆ. ಇದಕ್ಕೆ ಅವರು ಪ್ರಶ್ನಿಸಿದಾಗ, ಅರುಣ್ ಬ್ಯಾಟ್‌ನಿಂದ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಇಬ್ಬರು ಗಾಯಗೊಂಡಿದ್ದು, ಸ್ಥಳೀಯರ ನೆರವಿನಿಂದ ಚಿಕಿತ್ಸೆ ಪಡೆಯಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಲ್ಲೆ ವೇಳೆ ಆರೋಪಿ ಮದ್ಯ ಸೇವಿಸಿದ್ದ ಎನ್ನುವುದು ತಿಳಿದುಬಂದಿದೆ.

Share News

About BigTv News

Check Also

ಸಾಲದ ವಿಚಾರಕ್ಕೆ ಪತಿ-ಪತ್ನಿ ಕಲಹ : ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಕಲಬುರಗಿ: ಸಾಲದ ವಿಚಾರಕ್ಕೆ ಸಂಬಂಧಿಸಿದಂತೆ ದಂಪತಿ ನಡುವೆ ನಡೆದ ಕಲಹ ದುರಂತಕ್ಕೆ ಕಾರಣವಾಗಿದ್ದು, ತಾಯಿ ತನ್ನ ಇಬ್ಬರು ಪುತ್ರಿಯರೊಂದಿಗೆ ಬಾವಿಗೆ …

Leave a Reply

Your email address will not be published. Required fields are marked *