Breaking News

ಆಸ್ತಿಗಾಗಿ ಸ್ವಂತ ಅಣ್ಣನನ್ನೇ ಕಲ್ಲಿನಿಂದ ಜಜ್ಜಿ ಕೊಂದ ಪಾಪಿ ತಮ್ಮ

ಹಾವೇರಿ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ತಮ್ಮನೇ ಅಣ್ಣನನ್ನು ಕಲ್ಲಿನಿಂದ ಹೊಡೆದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಹಾನಗಲ್‌ನಲ್ಲಿ ನಡೆದಿದೆ. ಸಂತೋಷ್ ಮುರೇಗಪ್ಪ (30) ಕೊಲೆಯಾದವರು. ಅವರ ತಮ್ಮ ಕುಮಾರ್ (27) ಆರೋಪಿಯಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಂತೋಷ್ ಹಾಗೂ ಕುಮಾರ್ ನಡುವೆ 1 ಎಕರೆ ಜಮೀನಿನ ಹಂಚಿಕೆ ವಿಚಾರವಾಗಿ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿತ್ತು. ಸಂತೋಷ್ ಊರಿಗೆ ಬಂದಾಗ ಇದೇ ವಿಚಾರಕ್ಕೆ ಮತ್ತೆ ಜಗಳವಾಗಿದ್ದು, ಮಾತಿಗೆ ಮಾತು ಬೆಳೆದು ಕುಮಾರ್ ಬೃಹತ್ ಕಲ್ಲಿನಿಂದ ಅಣ್ಣನ ತಲೆಗೆ ಹೊಡೆದಿದ್ದಾನೆ. ತೀವ್ರವಾಗಿ ಗಾಯಗೊಂಡ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *