Breaking News

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ ಆರೋಪ: ದಲಿತ ದೌರ್ಜನ್ಯ ಪ್ರಕರಣ ದಾಖಲು

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ ನಿಂದಿಸಿ, ಕತ್ತಿಯಿಂದ ಹಲ್ಲೆ ನಡೆಸಲು ಯತ್ನಿಸಿದ ಆರೋಪದ ಮೇಲೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಆಗಸ್ಟ್ 5ರಂದು ಸ್ನೇಹಿತನನ್ನು ಬಸ್‌ಗೆ ಹತ್ತಿಸಿ ಮನೆಗೆ ತೆರಳುತ್ತಿದ್ದ ವೇಳೆ ವಿಜಯ ಅಲಿಯಾಸ್ ವಿಜಯರಾಜ್ ಎಂಬಾತ ಕತ್ತಿಯಿಂದ ಹಲ್ಲೆಗೆ ಯತ್ನಿಸಿದ್ದಾನೆ ಎಂದು ಬಾಲಕ ದೂರಿನಲ್ಲಿ ಆರೋಪಿಸಿದ್ದಾನೆ. ಸ್ಥಳೀಯ ಮಹಿಳೆಯೊಬ್ಬರು ಬಾಲಕನನ್ನು ಪಕ್ಕಕ್ಕೆ ಎಳೆದ ಪರಿಣಾಮ ಅನಾಹುತ ತಪ್ಪಿದೆ ಎನ್ನಲಾಗಿದೆ. ಬಳಿಕ ಜಾತಿ ನಿಂದನೆ ಮಾಡಿ ಗ್ರಾಮದಿಂದ ಹೊರಹಾಕುವುದಾಗಿ ಬೆದರಿಕೆ ಹಾಕಿ ಮತ್ತೆ ಹಲ್ಲೆಗೆ ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ. ಘಟನೆಯ ವಿಡಿಯೋ ಹಾಗೂ ಫೋಟೋಗಳನ್ನು ಬಾಲಕ ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾನೆ. ಆಗಸ್ಟ್ 7ರಂದು ದೂರು ಸ್ವೀಕರಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *