Breaking News

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ, ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಮುಗಿಸಿದ ಪತ್ನಿ

ಚಿಕ್ಕೋಡಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಹತ್ಯೆ ಮಾಡಿ ಹೊಲದಲ್ಲಿ ಮುಚ್ಚಿಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು 6 ತಿಂಗಳ ಬಳಿಕ ಖಡಕಲಾಟ ಪೊಲೀಸರು ಬಂಧಿಸಿದ್ದಾರೆ. ಮೃತರನ್ನು ರಾಘು ಗಾವಡೆ (40) ಎಂದು ಗುರುತಿಸಲಾಗಿದೆ. ಆರೋಪಿಗಳನ್ನು ಬಂಗಾರಿ ಗಾವಡೆ ಹಾಗೂ ರಾಮಾ ರಾಣಗೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರಿ ಹಾಗೂ ರಾಮಾ ರಾಣಗೆ ನಡುವೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದ್ದು, ಇದಕ್ಕೆ ಪತಿ ರಾಘು ಅಡ್ಡಿಯಾಗಿದ್ದರಿಂದ ಇಬ್ಬರೂ ಸೇರಿ ಕೊಲೆ ಸಂಚು ರೂಪಿಸಿದ್ದರು. ರಾಘುವನ್ನು ಹೊಲಕ್ಕೆ ಕರೆಸಿಕೊಂಡು ಹತ್ಯೆ ಮಾಡಿ, ಶವವನ್ನು ಮುಚ್ಚಿಟ್ಟಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಬಳಿಕ ಪತಿ ಕುರಿ ಕಾಯಲು ಬೇರೆ ಜಿಲ್ಲೆಗೆ ತೆರಳಿದ್ದಾನೆ ಎಂದು ಬಂಗಾರಿ ಕುಟುಂಬಸ್ಥರನ್ನು ನಂಬಿಸಿದ್ದಳು. ಸಹೋದರ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಪೊಲೀಸರು 6 ತಿಂಗಳ ಬಳಿಕ ಪ್ರಕರಣದ ಸತ್ಯ ಬಯಲಿಗೆಳೆದಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಕಾಲೇಜು ಬಳಿ ಮಾರಾಟ: ಆರೋಪಿ ಬಂಧನ

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು …

Leave a Reply

Your email address will not be published. Required fields are marked *