ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಬಚ್ಚಿಟ್ಟು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು ಬಂಧಿಸಿದ್ದಾರೆ. ಭೋಲು ಪ್ರಜಾಪತಿ ಎಂಬಾತ ಕಾಲೇಜೊಂದರ ಬಳಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯಿಂದ ₹54 ಸಾವಿರ ಮೌಲ್ಯದ 6 ಕೆಜಿ ಗಾಂಜಾ, ಮೊಬೈಲ್ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹94 ಸಾವಿರ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಗಾಂಜಾ ಎಲ್ಲಿಂದ ಪೂರೈಕೆಯಾಗುತ್ತಿತ್ತು ಹಾಗೂ ಯಾರಿಗೆ ಮಾರಾಟ ಮಾಡಲಾಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news
