Breaking News

ಬಿಡದಿ: ಹೆದ್ದಾರಿಯಲ್ಲಿ ಬಸ್ ಪಲ್ಟಿ; ಇಬ್ಬರ ಸಾವು

ಬಿಡದಿ (ರಾಮನಗರ): ಇಲ್ಲಿನ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಅವರೆಗೆರೆ ಸೇತುವೆ ಬಳಿ ಬೆಳಿಗ್ಗೆ ಕೇರಳದ ಬಸ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದರಿಂದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದಾರೆ. ಹಲವರಿಗೆ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೇರಳದಿಂದ ರಾತ್ರಿ ಹೊರಟಿದ್ದ ಬಸ್ ಬೆಂಗಳೂರಿಗೆ ಬರುತ್ತಿತ್ತು. ಅತಿ ವೇಗವಾಗಿ ಬಸ್ ಚಾಲನೆ ಮಾಡುತ್ತಿದ್ದ ಚಾಲಕ ನಿದ್ರೆ ಮಂಪರಿನಲ್ಲಿ ರಸ್ತೆ ವಿಭಜಕಕ್ಕೆ ಗುದ್ದಿದಾಗ ಬಸ್ ಪಲ್ಟಿಯಾಗಿದೆ. ಶವಗಳನ್ನು ಚಲ್ಲಘಟ್ಟದಲ್ಲಿರುವ ರಾಜರಾಜೇಶ್ವರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *