ಮೈಸೂರು: ರಜೆ ನೀಡದೆ ಕಿರುಕುಳ ನೀಡುತ್ತಿದ್ದ ಮಹಿಳಾ ಸೂಪರ್‌ವೈಸರ್ ವಿರುದ್ಧ ಡೆತ್‌ನೋಟ್ ಬರೆದಿಟ್ಟು 45 ವರ್ಷದ ಮಹಿಳೆಯೊಬ್ಬರು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿನಕಲ್‌ನಲ್ಲಿ ನಡೆದಿದೆ. ಮೃತರನ್ನು ನಾಗೇಶ್ವರಿ ಎಂದು ಗುರುತಿಸಲಾಗಿದೆ. ಹಿನಕಲ್‌ನ ಮಾರ್ಟ್‌ನಲ್ಲಿ ಕೆಲಸ ಮಾಡುತ್ತಿದ್ದ ಅವರು, ನಾಲ್ಕು ತಿಂಗಳ ಹಿಂದೆ ಸೂಪರ್‌ವೈಸರ್ ಆಗಿದ್ದ ಡಾಲಿ ಎಂಬುವವರು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ. ಇದರಿಂದ ಮಾರ್ಟ್ ಕೆಲಸ ಬಿಟ್ಟು ಬೇರೆ ಶಾಪಿಂಗ್ ಮಾಲ್‌ಗೆ ಸೇರಿದ್ದರೂ ಅಲ್ಲಿಗೂ ತೆರಳಿ ಕಿರುಕುಳ ನೀಡುತ್ತಿದ್ದರೆನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದಿದ್ದ ನಾಗೇಶ್ವರಿ ಶುಕ್ರವಾರ ಡೆತ್‌ನೋಟ್ ಬರೆದಿಟ್ಟು ಕೀಟನಾಶಕ ಸೇವಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

