Breaking News

ವಸತಿ ನಿಲಯದ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು – ಹಾಸ್ಟೆಲ್ ಸಿಬ್ಬಂದಿ ನಿರ್ಲಕ್ಷ್ಯದ ಆರೋಪ!

ಪಾವಗಡ: ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಂಗಸಮುದ್ರ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಕಾರಗಾನಹಟ್ಟಿ ಗ್ರಾಮದ ನರಸಿಂಹಮೂರ್ತಿ ಹಾಗೂ ಶಾರದಮ್ಮ ದಂಪತಿಯ ಪುತ್ರಿ ಪ್ರಿಯಾಂಕ (13) ಮೃತ ಬಾಲಕಿ. 6 ಮತ್ತು 7ನೇ ತರಗತಿಯನ್ನು ಇದೇ ಹಾಸ್ಟೆಲ್‌ನಲ್ಲಿ ಓದಿದ್ದ ಪ್ರಿಯಾಂಕ, 8ನೇ ತರಗತಿಗೆ ಇಲ್ಲಿಗೆ ಸೇರಲು ಇಷ್ಟವಿರಲಿಲ್ಲ ಎನ್ನಲಾಗಿದೆ. ಮೊರಾರ್ಜಿ ವಸತಿ ಶಾಲೆಗೆ ಸೀಟು ಸಿಗದ ಹಿನ್ನೆಲೆಯಲ್ಲಿ ಆ.7ರಂದು ಬೆಳಗ್ಗೆ ಪೋಷಕರು ಮತ್ತೆ ಹಾಸ್ಟೆಲ್‌ಗೆ ಬಿಟ್ಟು ಬಂದಿದ್ದರು. ಅದೇ ದಿನ ಸಂಜೆ ತಂದೆ ಮಗಳನ್ನು ಭೇಟಿಯಾಗಿ ಮನೆಗೆ ಮರಳಿದ್ದರು. ಶುಕ್ರವಾರ ಸಂಜೆ ಘಟನೆ ನಡೆದಿದ್ದರೂ ಶನಿವಾರ ಬೆಳಗ್ಗೆ ಹಾಸ್ಟೆಲ್ ಸಿಬ್ಬಂದಿ ಪೋಷಕರಿಗೆ ಕರೆ ಮಾಡಿ ಬಾಲಕಿ ಪ್ರಜ್ಞಾಹೀನವಾಗಿ ಬಿದ್ದಿರುವುದಾಗಿ ತಿಳಿಸಿದ್ದಾರೆ. ಆಸ್ಪತ್ರೆಗೆ ಕರೆದೊಯ್ದಾಗ, ಬಾಲಕಿ ಮೃತಪಟ್ಟಿರುವುದು ದೃಢಪಟ್ಟಿದೆ. ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಪೋಷಕರು ಆರೋಪಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಟಿ. ನರಸೀಪುರ: ಹಾಡಹಗಲೇ ಯುವಕನ ಬರ್ಬರ ಕೊಲೆ; ಠಾಣೆಗೆ ಹಾಜರಾದ ಮೂವರು ಆರೋಪಿಗಳು

ಟಿ.ನರಸೀಪುರದ ವಿವೇಕನಗರದಲ್ಲಿ ಶನಿವಾರ ಬೆಳಗ್ಗೆ 9.30ರ ಸುಮಾರಿಗೆ ಸುಭಾಷ್ (34) ಎಂಬ ಯುವಕನನ್ನು ಮೂವರು ಆರೋಪಿಗಳು ಡ್ರ್ಯಾಗರ್‌ ಮತ್ತು ಚೂರಿಯಿಂದ …

Leave a Reply

Your email address will not be published. Required fields are marked *