Breaking News

ಬೆಂಗಳೂರಿನ ಮನೆಯಲ್ಲಿ ಮಹಿಳೆಯ ಅಸ್ಥಿಪಂಜರ ಪತ್ತೆ – ಒಂದೂವರೆ ವರ್ಷದ ಹಿಂದೆ ಮೃತಪಟ್ಟಿರುವ ಶಂಕೆ!

ಬೆಂಗಳೂರು: ಟಿ. ದಾಸರಹಳ್ಳಿ ಬಾಗಲಗುಂಟೆ ವ್ಯಾಪ್ತಿಯ ಹಾವನೂರು ಬಡಾವಣೆಯಲ್ಲಿ ಒಂದೂವರೆ ವರ್ಷದಿಂದ ಮುಚ್ಚಿದ್ದ ಮನೆಯ ಬಾತ್‌ರೂಂನಲ್ಲಿ 50 ವರ್ಷದ ಮಹಿಳೆಯ ಅಸ್ಥಿಪಂಜರ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ. ಮೃತರನ್ನು ದಾಕ್ಷಾಯಿಣಿ (50) ಎಂದು ಗುರುತಿಸಲಾಗಿದೆ. ಸುಮಾರು 10 ವರ್ಷಗಳ ಹಿಂದೆ ಪತಿ ಉಮೇಶ್ ಮೃತಪಟ್ಟಿದ್ದು, ಬಳಿಕ ಅನಾರೋಗ್ಯದಿಂದ ಏಕೈಕ ಮಗನೂ ಮೃತಪಟ್ಟಿದ್ದ. ಕುಟುಂಬಸ್ಥರನ್ನು ಕಳೆದುಕೊಂಡಿದ್ದ ದಾಕ್ಷಾಯಿಣಿ ಹಲವು ವರ್ಷಗಳಿಂದ ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು. ಸುಮಾರು ಒಂದೂವರೆ ವರ್ಷದಿಂದ ಮನೆ ಮುಚ್ಚಿದ್ದ ಸ್ಥಿತಿಯಲ್ಲಿತ್ತು. ಗುರುವಾರ ರಾತ್ರಿ ಮನೆ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಕಳ್ಳತನದ ಶಂಕೆಯಿಂದ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಬಾತ್‌ರೂಂನಲ್ಲಿ ಅಸ್ಥಿಪಂಜರ ಪತ್ತೆಯಾಗಿದೆ. ದಾಕ್ಷಾಯಿಣಿ ಒಂದೂವರೆ ವರ್ಷದ ಹಿಂದೆಯೇ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಅಸ್ಥಿಪಂಜರವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿ ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಹುಬ್ಬಳ್ಳಿ ಸಿದ್ಧಾರೂಢ ಮಠದ ಬಳಿ ಮಹಿಳೆ ಮೇಲೆ ಅತ್ಯಾಚಾರ ಆರೋಪ ಪ್ರಕರಣ ದಾಖಲು

ಹುಬ್ಬಳ್ಳಿ: ಸಿದ್ಧಾರೂಢ ಮಠದ ಪುಷ್ಕರಣಿ ಬಳಿಯ ಶೌಚಾಲಯದ ಹಿಂಭಾಗ 50 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಹಳೇಹುಬ್ಬಳ್ಳಿ …

Leave a Reply

Your email address will not be published. Required fields are marked *