ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರದಲ್ಲಿ ರೌಡಿಶೀಟರ್‌ಗಳ ನಡುವಿನ ಜಗಳ ಬಿಡಿಸಲು ಬಂದ ಪೊಲೀಸ್ ಸಿಬ್ಬಂದಿ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿದ ಘಟನೆ ನಡೆದಿದೆ. ತಡರಾತ್ರಿ ರೌಡಿಶೀಟರ್ ರಾಜು ಹಾಗೂ ಮನೋಜ್ ಗುಂಪಿನ ನಡುವೆ ಮಾರಾಮಾರಿ ನಡೆದಿದ್ದು, ಮಾಹಿತಿ ತಿಳಿದು ಹವಾಲ್ದಾರ್ ಸಂಗಪ್ಪ ಹಾಗೂ ಕಾನ್ಸ್‌ಟೇಬಲ್ ವಿನಾಯಕ್ ಶಟ್ಟಿ ಸ್ಥಳಕ್ಕೆ ತೆರಳಿದ್ದರು. ಜಗಳ ಬಿಡಿಸಲು ಪೊಲೀಸರು ಮುಂದಾದಾಗ ರೌಡಿಗಳು ಏಕಾಏಕಿ ಅವರ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮಂಗಳೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜು, ರಿತೀಕ್, ಮದನ್ ನಾಯ್ಕ್, ಯೋಗೇಶ್ ಹಾಗೂ ದರ್ಶನ್ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ರಾಜು ಹಾಗೂ ಮನೋಜ್‌ನನ್ನು ವಶಕ್ಕೆ ಪಡೆದಿದ್ದು, ಉಳಿದ ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಪೊಲೀಸರ ಮೇಲೆಯೇ ದಾಳಿ ನಡೆದಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

