Breaking News

ಕೆಎಎಸ್‌ ನೇಮಕಾತಿಯಲ್ಲಿ ಅಕ್ರಮ ಆರೋಪ- ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ, ಅಭ್ಯರ್ಥಿ ವಿರುದ್ಧ ಎಫ್‌ಐಆರ್

ಬೆಂಗಳೂರು: ಕೆಎಎಸ್‌ ಪರೀಕ್ಷೆ ಫಲಿತಾಂಶಕ್ಕಾಗಿ ಕಾಯುತ್ತಿದ್ದ ಅಭ್ಯರ್ಥಿಯೊಬ್ಬರು ಗೆಜೆಟೆಡ್ ಪ್ರೊಬೇಷನರಿ ಹುದ್ದೆ ಪಡೆಯಲು ಅಕ್ರಮ ಮಾರ್ಗ ಅನುಸರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಹಾಗೂ ಕಲಬುರಗಿ ಮೂಲದ ಅಭ್ಯರ್ಥಿ ಮಮಿತಾ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಮಮಿತಾ ಅವರು ಹುದ್ದೆ ಪಡೆಯುವ ಉದ್ದೇಶದಿಂದ ಕೆಪಿಎಸ್‌ಸಿ ಸದಸ್ಯೆ ಶಾಂತಾ ಹೊಸಮನಿ ಅವರನ್ನು ಸಂಪರ್ಕಿಸಿ ಅಕ್ರಮವಾಗಿ ಹಣ ನೀಡಲು ಮುಂದಾಗಿದ್ದರು ಎಂದು ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ದೂರು ನೀಡಿದ್ದರು. ದಾಖಲೆ ಪರಿಶೀಲನೆ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಇತ್ತೀಚೆಗೆ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಪ್ರಕರಣದ ತನಿಖೆ ಸಿಐಡಿಗೆ ವಹಿಸಿರುವ ಬೆನ್ನಲ್ಲೇ ಮತ್ತೊಂದು ನೇಮಕಾತಿ ಅಕ್ರಮ ಆರೋಪ ಬೆಳಕಿಗೆ ಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *