Breaking News

ನಿರ್ಮಲಾ ಸೀತಾರಾಮನ್‌, ಪ್ರಿಯಾಂಕಾ AI ವಿಡಿಯೊ ಸೃಷ್ಟಿಸಿ ₹20.87 ಲಕ್ಷ ವಂಚನೆ

ಹಾವೇರಿ: ನಿರ್ಮಲಾ ಸೀತಾರಾಮನ್ ಹಾಗೂ ಪ್ರಿಯಾಂಕಾ ಗಾಂಧಿ ಅವರ ಎಐ ವಿಡಿಯೊ ಬಳಸಿ ಹೂಡಿಕೆ ಹೆಸರಿನಲ್ಲಿ ಮಹಿಳೆಯೊಬ್ಬರಿಂದ ₹20.87 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಜಿಲ್ಲಾ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ‘ಬಿಎಕ್ಸ್‌ಬಿ ಟ್ರೇಡಿಂಗ್ ಮಾರ್ಕೆಟ್’ ಹೆಸರಿನ ಜಾಹೀರಾತು ನೋಡಿದ್ದ ಮಹಿಳೆ, ವಿಡಿಯೊವನ್ನು ನಿಜವೆಂದು ನಂಬಿ ಆರೋಪಿಗಳನ್ನು ಸಂಪರ್ಕಿಸಿದ್ದರು. ಆರೋಪಿಗಳು ಕಳುಹಿಸಿದ ಲಿಂಕ್ ಮೂಲಕ ನೋಂದಣಿ ಮಾಡಿಕೊಂಡು ಹಣ ಹೂಡಿಕೆ ಮಾಡಿದ್ದರು. ಆರ್‌ಟಿಜಿಎಸ್ ಹಾಗೂ ಐಎಂಪಿಎಸ್ ಮೂಲಕ ಹಂತ ಹಂತವಾಗಿ ಹಣ ವರ್ಗಾಯಿಸಿದ ಬಳಿಕ ಆರೋಪಿಗಳು ಸಂಪರ್ಕಕ್ಕೆ ಸಿಗದೆ ನಾಪತ್ತೆಯಾಗಿದ್ದಾರೆ. ಮಹಿಳೆಯ ಪತಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *