ಉಡುಪಿ, ಆ.9: ಅಪಘಾತಕ್ಕೀಡಾದ ವ್ಯಕ್ತಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ ವೇಳೆ ನಡೆದ ಅನ್ಯಾಯ ಮತ್ತು ನಿರ್ಲಕ್ಷ್ಯದ ವಿರುದ್ಧ ಧ್ವನಿ ಎತ್ತಿದ್ದ ಯುವತಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಕುರಿತು ಕರವೇ ಕಾರ್ಯಕರ್ತರು ಉಡುಪಿ ನಗರ ಠಾಣೆಗೆ ಭೇಟಿ ನೀಡಿ ಕ್ರಮಕ್ಕೆ ಆಗ್ರಹಿಸಿದ್ದಾರೆ. ಅಕ್ಷಿತಾ ಪೂಜಾರಿ ಸಮಾಜಮುಖಿ ಕಳಕಳಿಯಿಂದ ಅನ್ಯಾಯವನ್ನು ಪ್ರಶ್ನಿಸಿದ ಬಳಿಕ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗಿದೆ. ಅವರ ಬೆಂಬಲವಾಗಿ ಕರವೇ ಜಿಲ್ಲಾಧ್ಯಕ್ಷ ಅ.ರಾ. ಪ್ರಭಾಕರ್ ಪೂಜಾರಿ ನೇತೃತ್ವದಲ್ಲಿ ಕಾರ್ಯಕರ್ತರು ಠಾಣೆಗೆ ತೆರಳಿದ್ದರು. ಬೆದರಿಕೆ ನೀಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಮನವಿ ಸಲ್ಲಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

