Breaking News

ರಾಜ್ಯದಲ್ಲಿ ಘೋರ ಕೃತ್ಯ : ಆರೈಕೆ ಮಾಡಲಾಗದೇ 50 ದಿನದ ಹಸುಗೂಸಿನ ಹತ್ಯೆ : ಹೆತ್ತ ತಾಯಿ ಸೇರಿ ನಾಲ್ವರು ಅರೆಸ್ಟ್!

ಬೀದರ್: 50 ದಿನದ ಹಸುಗೂಸನ್ನು ಆರೈಕೆ ಮಾಡಲು ಸಾಧ್ಯವಾಗದೆ ಹೆತ್ತ ತಾಯಿಯೇ ಕುಟುಂಬದವರೊಂದಿಗೆ ಸೇರಿ ಕೊಲೆ ಮಾಡಿ ಬಾವಿಗೆ ಎಸೆದಿರುವ ಅಮಾನವೀಯ ಘಟನೆ ಔರಾದ್ ತಾಲೂಕಿನ ವಡಗಾಂವ್ (ದೇ) ಗ್ರಾಮದಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತಾಯಿ ವಾಣಿಶ್ರೀ, ತಂದೆ ಬಸವರಾಜ್, ತಾಯಿ ರತ್ನಮಾ ಹಾಗೂ ಸಹೋದರ ಸಂತೋಷ್ ಸೇರಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ವಾಣಿಶ್ರೀ ಹೆರಿಗೆಗಾಗಿ ತವರು ಮನೆಗೆ ಬಂದಿದ್ದ ವೇಳೆ 50 ದಿನದ ಓಂಕಾರ ಎಂಬ ಗಂಡು ಮಗುವನ್ನು ಕೊಲೆ ಮಾಡಲಾಗಿದೆ. ಬಳಿಕ ಮಗುವನ್ನು ದೇವರು ತೆಗೆದುಕೊಂಡು ಹೋಗಿದ್ದಾನೆ ಎಂದು ಪತಿ ಸಂಜುಗೆ ಸುಳ್ಳು ಹೇಳಿದ್ದರು. ಅನುಮಾನಗೊಂಡ ಸಂಜು ಸಂತಪೂರ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ವಿಚಾರಣೆ ವೇಳೆ ಮಗುವನ್ನು ಕೊಲೆ ಮಾಡಿ ಬಾವಿಗೆ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಕೃತ್ಯದ ಹಿಂದೆ ಮೂಢನಂಬಿಕೆಯ ಕೈವಾಡವಿದೆಯೇ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *