ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ನಗರದ ಸ್ಟೋನ್ ಹಿಲ್ ಬೆಟ್ಟದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಬೆಟ್ಟದ ಮೇಲಿದ್ದ ನೂರಾರು ಟನ್ ಕಸ ಹಾಗೂ ಮಣ್ಣು ಕೆಳಭಾಗಕ್ಕೆ ಕುಸಿದುಬಂದಿದೆ. ಬೆಟ್ಟದ ಮೇಲೆ ವರ್ಷಗಳಿಂದ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡಿರುವುದೇ ಘಟನೆಗೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೆಟ್ಟದ ಕೆಳಭಾಗದಲ್ಲಿರುವ ಪೊಲೀಸ್ ವಸತಿ ಗೃಹಗಳತ್ತ ಕಸ-ಮಣ್ಣಿನ ರಾಶಿ ಹರಿದುಬಂದಿದ್ದು, ನಿವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ತಕ್ಷಣ ಕಸ ತೆರವುಗೊಳಿಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದಿದ್ದರೆ ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ನಗರಸಭೆ ಸದಸ್ಯ ಅಪ್ಪಣ್ಣ ಎಚ್ಚರಿಸಿದ್ದಾರೆ. ಇದೇ ವೇಳೆ ಭಾರಿ ಮಳೆಯಿಂದ ಆಕಾಶವಾಣಿ ಟವರ್ ಬಳಿ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಕುಸಿದಿದ್ದು, ಕಾರ್ಮಿಕರು ಅಪಾಯದಿಂದ ಪಾರಾಗಿದ್ದಾರೆ. ತಲಕಾವೇರಿ, ಭಾಗಮಂಡಲ ಸೇರಿದಂತೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಹೊಳೆ-ನದಿಗಳ ನೀರಿನ ಮಟ್ಟ ಏರಿಕೆಯಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

