ಉಳ್ಳಾಲ: ತೊಕ್ಕೊಟ್ಟಿನ ವಿನಮ್ರ ಬಾರ್‌ಗೆ ತಲವಾರು ಬೀಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಬಾರ್ ಬಂದ್ ಮಾಡುವಂತೆ ಬೆದರಿಕೆ ಹಾಕಿದ ಆರೋಪದ ಮೇಲೆ ಕುಖ್ಯಾತ ರೌಡಿಶೀಟರ್ ಸೇರಿದಂತೆ ಇಬ್ಬರನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮೊಹಮ್ಮದ್ ಶಾಕಿರ್ (31) ಹಾಗೂ ಅಶ್ಫಾಕ್ (28) ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಶಾಕಿರ್ ತಲವಾರು ಹಿಡಿದು ಬಾರ್‌ಗೆ ನುಗ್ಗಿ ಸಿಬ್ಬಂದಿಗೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ವೇಳೆ ಬಾರ್‌ನಲ್ಲಿದ್ದ ಗ್ರಾಹಕರು ಭಯಭೀತರಾಗಿ ಓಡಿಹೋಗಿದ್ದು, ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆ ಬಳಿಕ ಪೊಲೀಸರು ಇಬ್ಬರನ್ನೂ ಬಂಧಿಸಿದ್ದು, ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿದ್ದಾರೆ. ಶಾಕಿರ್ ವಿರುದ್ಧ ಈಗಾಗಲೇ ಹಲವು ಅಪರಾಧ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

