Breaking News

ಬೆಂಗಳೂರಿನಲ್ಲಿ ಖಾಕಿ ಬಿಗ್‌ ಬೇಟೆ: 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಸೆರೆ!

ಬೆಂಗಳೂರು: ‘ಮಿಷನ್ RISE’ ಹಾಗೂ ‘ಬೇಡ ಬ್ರೋ’ ಅಭಿಯಾನದಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, 55.8 ಕೋಟಿ ರೂ. ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಸಿಸಿಬಿ ಸೇರಿದಂತೆ 16 ಪೊಲೀಸ್ ಯೂನಿಟ್‌ಗಳ ಕಾರ್ಯಾಚರಣೆಯಲ್ಲಿ 8 ವಿದೇಶಿಯರು ಹಾಗೂ 21 ಅನ್ಯರಾಜ್ಯದವರು ಸೇರಿದಂತೆ 39 ಆರೋಪಿಗಳನ್ನು ಬಂಧಿಸಲಾಗಿದೆ. ಕಳೆದ 10 ದಿನಗಳಲ್ಲಿ ನಗರದ 16 ಠಾಣಾ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿ 21.6 ಕೆಜಿ ಎಂಡಿಎಂಎ, 184.6 ಕೆಜಿ ಗಾಂಜಾ, ಹೈಡ್ರೋ ಗಾಂಜಾ, ಅಫೀಮು, ಕೊಕೇನ್ ಹಾಗೂ ಮಾರ್ಫಿನ್ ವಶಪಡಿಸಿಕೊಳ್ಳಲಾಗಿದೆ. ಜೊತೆಗೆ 17 ಲಕ್ಷ ರೂ. ನಗದು, 22 ಮೊಬೈಲ್‌ಗಳು ಮತ್ತು 5 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಅಮೃತಹಳ್ಳಿ ಪೊಲೀಸರು ದೆಹಲಿ ಮೂಲದ ಆಮ್ನಿ ಸಿಂಗ್ ಹಾಗೂ ನೈಜೀರಿಯಾ ಮೂಲದ ಓಬಮ್ ಎಂಬವರನ್ನು ಬಂಧಿಸಿ 28.8 ಕೋಟಿ ರೂ. ಮೌಲ್ಯದ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ದೆಹಲಿಯಲ್ಲಿ ಡ್ರಗ್ಸ್ ತಯಾರಿಸಿ ಬೆಂಗಳೂರಿನ ವಿದ್ಯಾರ್ಥಿಗಳು ಹಾಗೂ ಸ್ಥಳೀಯರಿಗೆ ಮಾರಾಟ ಮಾಡುತ್ತಿದ್ದರು ಎಂಬುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *