ಬೆಂಗಳೂರು: ನಗರದಲ್ಲಿ ಮಾದಕ ವಸ್ತುಗಳ ಮಾರಾಟ ಮಾಡುತ್ತಿದ್ದ ಬೃಹತ್ ಜಾಲವನ್ನು ಸಿಸಿಬಿ ಹಾಗೂ ನಗರ ಪೊಲೀಸರು ಭೇದಿಸಿದ್ದು, 8 ವಿದೇಶಿ, 21 ಹೊರರಾಜ್ಯದವರು ಹಾಗೂ 10 ಸ್ಥಳೀಯರು ಸೇರಿ 39 ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 28.07 ಕೋಟಿ ರೂ. ಮೌಲ್ಯದ 200 ಕೆಜಿಗೂ ಅಧಿಕ ಮಾದಕ ವಸ್ತು ಜಪ್ತಿ ಮಾಡಲಾಗಿದೆ. ಆರೋಪಿಗಳಿಂದ ಎಂಡಿಎಂಎ, ಕೋಕೇನ್, ಹೈಡ್ರೋ ಗಾಂಜಾ, ಗಾಂಜಾ, ಅಫೀಮು ಹಾಗೂ ಮಾರ್ಫಿನ್ ಸೇರಿದಂತೆ ವಿವಿಧ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 17 ಲಕ್ಷ ರೂ. ನಗದು, 22 ಮೊಬೈಲ್ ಹಾಗೂ 5 ದ್ವಿಚಕ್ರ ವಾಹನಗಳನ್ನೂ ಜಪ್ತಿ ಮಾಡಲಾಗಿದೆ. ಆರೋಪಿಗಳು ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ ಸಾರ್ವಜನಿಕರು ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪೂರೈಕೆದಾರರ ಪತ್ತೆ ಕಾರ್ಯ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

