Breaking News

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸಿದವನ ಬಂಧನ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2ರ ವಾಹನ ನಿಲುಗಡೆ ಪ್ರದೇಶದಲ್ಲಿ ₹3 ಕೋಟಿ ಮೌಲ್ಯದ 3.078 ಕೆ.ಜಿ. ಹೈಡ್ರೋ ಗಾಂಜಾ ಮಾರಾಟಕ್ಕೆ ಯತ್ನಿಸಿದ ಆರೋಪಿಯನ್ನು ವಿಮಾನ ನಿಲ್ದಾಣ ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಮುಂಬೈ ನಿವಾಸಿ ರಾಕೇಶ್ ಸತ್ಯಭೂಷಣ ಅಗರ್‌ವಾಲ್ (40) ಬಂಧಿತ. ಜುಲೈ 30ರಂದು ದೊರೆತ ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ತಪಾಸಣೆ ವೇಳೆ ಆತನ ಟ್ರಾಲಿ ಬ್ಯಾಗ್‌ನಲ್ಲಿದ್ದ ಕಪ್ಪು ಪ್ಲಾಸ್ಟಿಕ್ ಚೀಲದಲ್ಲಿ 3.078 ಕೆ.ಜಿ. ಹೈಡ್ರೋ ಗಾಂಜಾ ಪತ್ತೆಯಾಗಿದೆ. ಮಾದಕ ವಸ್ತುವನ್ನು ಜಪ್ತಿ ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *