Breaking News

ರಾಡ್ ಹಿಡಿದು ಮಧ್ಯರಾತ್ರಿ ಮನೆಗೆ ನುಗ್ಗಿದ ಖದೀಮರು: ಚಿನ್ನಾಭರಣ, ಬೆಳ್ಳಿ, ನಗದು ದೋಚಿ ಪರಾರಿ!

ದೇವನಹಳ್ಳಿ, ಆ.10: ಮಾಲೀಕರು ಊರಿಗೆ ತೆರಳಿದ್ದನ್ನೇ ಬಂಡವಾಳ ಮಾಡಿಕೊಂಡು ಕೆಲಸದವರೇ ಮನೆಗೆ ಕನ್ನ ಹಾಕಿರುವ ಘಟನೆ ಹೊಸಕೋಟೆ ಹೊರವಲಯದಲ್ಲಿ ನಡೆದಿದೆ. ಮನೆಯ ಬಾಗಿಲು ಒಡೆದು ನುಗ್ಗಿದ ಆರೋಪಿಗಳು ಚಿನ್ನಾಭರಣ, ಬೆಳ್ಳಿ ಹಾಗೂ ನಗದು ದೋಚಿ ಪರಾರಿಯಾಗಿದ್ದಾರೆ. ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪಾಲಮ್ ವಿಲ್ಲಾ ಬಡಾವಣೆಯ ರವಿ ರಾಜನ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಎರಡು ತಿಂಗಳಿಂದ ಮನೆ ಕೆಲಸ ಮಾಡುತ್ತಿದ್ದ ಆರೋಪಿಗಳಿಗೆ ಮನೆಯ ಒಳಗಿನ ಮಾಹಿತಿ ಹಾಗೂ ಕುಟುಂಬದ ಚಲನವಲನ ತಿಳಿದಿತ್ತು ಎನ್ನಲಾಗಿದೆ. ಕುಟುಂಬಸ್ಥರು ಊರಿಗೆ ತೆರಳಿದ್ದ ವೇಳೆ ಆರೋಪಿಗಳು ಕಳ್ಳತನ ಮಾಡಿದ್ದಾರೆ. ಮನೆಗೆ ವಾಪಸ್‌ ಬಂದಾಗ ಬಾಗಿಲು ಒಡೆದಿರುವುದು ಗಮನಕ್ಕೆ ಬಂದಿದೆ. ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಇಬ್ಬರು ರಾಡ್ ಹಿಡಿದು ಮನೆಗೆ ನುಗ್ಗಿ ಕಳ್ಳತನ ಮಾಡಿರುವುದು ಪತ್ತೆಯಾಗಿದೆ. ಈ ಸಂಬಂಧ ಹೊಸಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *