ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿರುವ ತಾಜ್ ಹೋಟೆಲ್‌ನಲ್ಲಿ ತಂದೆಯೊಬ್ಬ ತನ್ನ ಇಬ್ಬರು ಪುಟ್ಟ ಹೆಣ್ಣುಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಶೇಕ್ ಜೋಯಾ (10) ಹಾಗೂ ಶೇಕ್ ಜೆಹರಾ (5) ಮೃತ ಮಕ್ಕಳು. ತಂದೆ ಇಮ್ರಾನ್ ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಗವಾರ ಮೂಲದ ಇಮ್ರಾನ್ ‘ಜಿಮ್ಮಿ ’ ಕ್ಯಾಬ್ ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿದ್ದ. ಕೃತ್ಯ ಎಸಗುವ ಉದ್ದೇಶದಿಂದಲೇ ತಾಜ್ ಹೋಟೆಲ್‌ನ 4ನೇ ಮಹಡಿಯ ಕೊಠಡಿಯನ್ನು ಬುಕ್ ಮಾಡಿದ್ದ ಎನ್ನಲಾಗಿದೆ. ಮಕ್ಕಳನ್ನು ಕೊಠಡಿಗೆ ಕರೆತಂದು ನೇಣು ಬಿಗಿದು ಕೊಲೆ ಮಾಡಿದ ಬಳಿಕ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳದಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಪತ್ನಿಯ ಅಕ್ರಮ ಸಂಬಂಧದ ಆರೋಪ ಹಾಗೂ ಕುಟುಂಬದಲ್ಲಿನ ಕಲಹವೇ ಕೃತ್ಯಕ್ಕೆ ಕಾರಣ ಎಂದು ಅದರಲ್ಲಿ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ. ರಕ್ತಸ್ರಾವದಿಂದ ಬಳಲುತ್ತಿದ್ದ ಇಮ್ರಾನ್‌ನನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರಿದಿದೆ. ಏರ್‌ಪೋರ್ಟ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

