Breaking News

ಸಿದ್ದೇಶ್ವರ ದೇವಸ್ಥಾನದಲ್ಲಿ ಕಿಡಿಗೇಡಿಗಳ ವಿಕೃತಿ – ಶಿವಲಿಂಗ, ನಂದಿ ಮೂರ್ತಿ ಭಗ್ನ

ಬೆಳಗಾವಿ: ಖಾನಾಪುರ ತಾಲೂಕಿನ ನಿಡಗಲ್ ಗ್ರಾಮದ ಆರಾಧ್ಯ ದೈವ ಸಿದ್ದೇಶ್ವರ ದೇವಸ್ಥಾನದಲ್ಲಿ ದುಷ್ಕರ್ಮಿಗಳು ಧಾರ್ಮಿಕ ವಿಗ್ರಹಗಳಿಗೆ ಹಾನಿ ಮಾಡಿರುವ ಘಟನೆ ನಡೆದಿದೆ. ದೇವಸ್ಥಾನದಲ್ಲಿದ್ದ ಶಿವಲಿಂಗ, ನಂದಿ ಮೂರ್ತಿ, ಆಮೆ ಆಕಾರದ ರಚನೆ ಹಾಗೂ ಮುಂಭಾಗದ ಬೃಂದಾವನವನ್ನು ಧ್ವಂಸಗೊಳಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ಧಾರ್ಮಿಕ ಮಹತ್ವದ ಜೊತೆಗೆ ಪ್ರವಾಸಿ ತಾಣವಾಗಿಯೂ ಗುರುತಿಸಿಕೊಂಡಿದೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳೀಯರಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ವಿವಿಧ ಹಿಂದೂ ಸಂಘಟನೆಗಳು ಕೃತ್ಯವನ್ನು ಖಂಡಿಸಿವೆ. ಈ ಸಂಬಂಧ ಗ್ರಾಮಸ್ಥರು ಖಾನಾಪುರ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳನ್ನು ಶೀಘ್ರ ಬಂಧಿಸಿ ದೇವಸ್ಥಾನಕ್ಕೆ ಸೂಕ್ತ ಭದ್ರತೆ ಒದಗಿಸುವಂತೆ ಒತ್ತಾಯಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *