Breaking News

ಉಗ್ರರೆಂದು ಶಂಕಿಸಿ ಟೆಕ್ಕಿಗಳ ಮೇಲೆ ಬೇಸ್‌ಬಾಲ್‌ ಬ್ಯಾಟ್‌ನಿಂದ ಹಲ್ಲೆ

ಬೆಂಗಳೂರು: ಭಯೋತ್ಪಾದಕರೆಂದು ಶಂಕಿಸಿ ಇಬ್ಬರು ಸಾಫ್ಟ್‌ವೇರ್ ಎಂಜಿನಿಯರ್‌ಗಳ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಎಚ್‌ಎಎಲ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹಲ್ಲೆಗೊಳಗಾದ ಸಂದೀಪ್ ಕುಮಾರ್ ಹಾಗೂ ರೋಹಿತ್ ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ. ಆ.6ರಂದು ಬೆಳಗಿನ ಜಾವ ಎಇಸಿಎಸ್ ಲೇಔಟ್‌ನಲ್ಲಿರುವ ಐಸ್‌ಕ್ರೀಮ್ ಅಂಗಡಿ ಬಳಿ ಇಬ್ಬರೂ ಸ್ನೇಹಿತನಿಗಾಗಿ ಕಾಯುತ್ತಿದ್ದರು. ಈ ವೇಳೆ ಕಾರಿನಲ್ಲಿ ಬಂದ ಅಪರಿಚಿತ ವ್ಯಕ್ತಿ, ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿದ್ದಾನೆ. ತಾವು ಭಾರತೀಯ ನಾಗರಿಕರು, ಭಯೋತ್ಪಾದಕರಲ್ಲ ಎಂದು ಅವರು ಉತ್ತರಿಸಿದ್ದಾರೆ. ಬಳಿಕ ಗುರುತಿನ ಚೀಟಿ ತೋರಿಸುವಂತೆ ಗದರಿಸಿದಾಗ, ಯಾವ ಅಧಿಕಾರದ ಮೇಲೆ ಗುರುತಿನ ಚೀಟಿ ಕೇಳುತ್ತಿದ್ದೀಯಾ ಎಂದು ಇಬ್ಬರೂ ಪ್ರಶ್ನಿಸಿದ್ದಾರೆ. ಇದರಿಂದ ಕೋಪಗೊಂಡ ವ್ಯಕ್ತಿ ಅವಾಚ್ಯವಾಗಿ ನಿಂದಿಸಿ ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆಗೆ ಪೊಲೀಸರು ಕಾರ್ಯಾಚರಣೆ ಮುಂದುವರಿಸಿದ್ದಾರೆ.

Share News

About BigTv News

Check Also

ಸರಗಳ್ಳತನ ಮಾಡುತ್ತಿದ್ದ ಅಪ್ರಾಪ್ತ ಸೇರಿ ಇಬ್ಬರು ಆರೋಪಿಗಳ ಬಂಧನ

ಬೆಂಗಳೂರು: ಅಪ್ರಾಪ್ತ ಬಾಲಕನೊಂದಿಗೆ ಸೇರಿ ಮಹಿಳೆಯರ ಚಿನ್ನದ ಮಾಂಗಲ್ಯ ಸರ ಕಳವು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಡೇಪಾಳ್ಯ ಪೊಲೀಸರು ವಶಕ್ಕೆ …

Leave a Reply

Your email address will not be published. Required fields are marked *