Breaking News

ನೋ ಪಾರ್ಕಿಂಗ್‌ನಲ್ಲಿ ಬೈಕ್: ಪೊಲೀಸರ ಎದುರೇ ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಯುವಕ

ಹಾವೇರಿ: ನೋ ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಪೊಲೀಸರು ವ್ಹೀಲ್‌ಕ್ಯಾಪ್‌ ಹಾಕಿದ್ದಕ್ಕೆ ಆಕ್ರೋಶಗೊಂಡ ಯುವಕನೊಬ್ಬ ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿದ ಘಟನೆ ನಗರದ ಹೊಸಮನಿ ಸಿದ್ದಪ್ಪ ವೃತ್ತದ ಬಳಿ ನಡೆದಿದೆ. ನೋ ಪಾರ್ಕಿಂಗ್‌ನಲ್ಲಿ ಬೈಕ್ ನಿಲ್ಲಿಸಿದ್ದಕ್ಕೆ ₹500 ದಂಡ ವಿಧಿಸಲಾಗಿತ್ತು. ದಂಡ ಕಟ್ಟಲು ಸಾಧ್ಯವಿಲ್ಲ ಎಂದು ರಂಪಾಟ ಮಾಡಿದ ಯುವಕ, ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್ಳಲು ಮುಂದಾಗಿದ್ದಾನೆ. ಸ್ಥಳೀಯರು ತಡೆದು ಆತನನ್ನು ರಕ್ಷಿಸಿದ್ದಾರೆ. ಘಟನೆಯಿಂದ ಸ್ಥಳದಲ್ಲಿ ಜನರು ಜಮಾಯಿಸಿ ಪೊಲೀಸರ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಇನ್‌ಸ್ಪೆಕ್ಟರ್ ಮೋತಿಲಾಲ್ ಪವಾರ ಹಾಗೂ ಸಿಬ್ಬಂದಿ ಪರಿಸ್ಥಿತಿ ನಿಯಂತ್ರಿಸಿದ್ದು, ಸಂಚಾರ ಪೊಲೀಸರು ಬೈಕ್‌ನ್ನು ವಶಕ್ಕೆ ಪಡೆದಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *