ಬೆಂಗಳೂರು: ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯಿಂದ ದೈಹಿಕ ಹಾಗೂ ಮಾನಸಿಕ ಕಿರುಕುಳ ಅನುಭವಿಸಿದ ಯುವತಿಗೆ ತ್ರಿಪಲ್ ತಲಾಖ್ ನೀಡಿ ಮನೆಯಿಂದ ಹೊರಹಾಕಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪತಿ ಹಲ್ಲೆ ನಡೆಸಿ ಕಾಲಿಗೆ ಬಿಸಿನೀರು ಸುರಿಸಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಪ್ರಕರಣದ ಹಿಂದೆ ಸಚಿವ ಜಮೀರ್ ಅಹ್ಮದ್ ಅವರ ಪಿಎ ಮಹ್ಮದ್ ಅಯೂಬ್ ಪಾಷಾ ಅವರ ಪ್ರಭಾವವಿದೆ ಎಂಬ ಆರೋಪವೂ ಕೇಳಿಬಂದಿದೆ. ದೂರು ನೀಡಲು ಸಚಿವರ ಕಚೇರಿ ಹಾಗೂ ಮನೆಗೆ ತೆರಳಿದರೂ ಸ್ಪಂದನೆ ಸಿಗಲಿಲ್ಲ, ಬದಲಾಗಿ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಇನ್ನು ಸೌತ್ ಈಸ್ಟ್ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಡಲಾಗಿತ್ತು ಎಂಬ ಆರೋಪ ಕೇಳಿಬಂದಿದೆ. ಈಗಾಗಲೇ ₹1.2 ಲಕ್ಷ ಹಣ ನೀಡಿರುವುದಾಗಿ ಕುಟುಂಬಸ್ಥರು ಆರೋಪಿಸಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

