ವಿಜಯನಗರ: ಹಗರಿಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಲಾಕಪ್ ಡೆತ್ ಪ್ರಕರಣದ ತನಿಖೆಯನ್ನು ಸಿಐಡಿ ಚುರುಕುಗೊಳಿಸಿದೆ. ಸಿಐಡಿ ಡಿವೈಎಸ್‌ಪಿ ಗೋಪಾಲಕೃಷ್ಣ ನೇತೃತ್ವದ ತಂಡ, ಪ್ರಕರಣದಲ್ಲಿ ಆರೋಪಿಗಳಾದ ಪೊಲೀಸ್ ಸಿಬ್ಬಂದಿ ವೆಂಕಟೇಶ್ ಮತ್ತು ರಾಘವೇಂದ್ರ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದೆ. ಆಗಸ್ಟ್ 1ರಂದು ಕೌಟುಂಬಿಕ ಕಲಹದ ವಿಚಾರಣೆಗೆ ಕರೆತರಲಾಗಿದ್ದ ಕಟ್ಟಡ ಕಾರ್ಮಿಕ ಸಿ. ಖಲೀಲ್ ಉಲ್ಲಾ(38) ಠಾಣೆಯ ಲಾಕಪ್‌ನಲ್ಲಿ ಮೃತಪಟ್ಟಿದ್ದರು. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸರನ್ನು ಬಂಧಿಸಲಾಗಿದ್ದು, ಲಾಕಪ್ ಡೆತ್‌ಗೆ ಕಾರಣ ಹಾಗೂ ಆರೋಪಿಗಳ ಪಾತ್ರದ ಬಗ್ಗೆ ಸಿಐಡಿ ತನಿಖೆ ನಡೆಸುತ್ತಿದೆ. ಘಟನೆಗೆ ಸಂಬಂಧಿಸಿದ ಮಹತ್ವದ ಮಾಹಿತಿಗಳನ್ನು ಅಧಿಕಾರಿಗಳು ಕಲೆಹಾಕುತ್ತಿದ್ದು, ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲು ಸಿದ್ಧತೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

