ಉಡುಪಿ: ಮುದರಂಗಡಿಯ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜ ಎಂಬುವರನ್ನು ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಉಡುಪಿ ನ್ಯಾಯಾಲಯವು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗಳಾದ ಉತ್ತರಾಖಂಡದ ಆಕಾಶ್ ಅಲಿಯಾಸ್ ಅನ್ಮೋಲ್ ರಸ್ತೋಗಿ ಹಾಗೂ ಬಿಹಾರದ ಜಿಯಾವುಲ್ಲಾ ಅಲಿಯಾಸ್ ದೀಪಕ್ ಎಂಬುವವರನ್ನು ಪ್ರಕರಣದ ತನಿಖಾಧಿಕಾರಿ ಕಾಪು ಪೊಲೀಸ್ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸರು ಆರೋಪಿಯನ್ನು ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ನ್ಯಾಯಾಧೀಶರಲ್ಲಿ ಮನವಿ ಮಾಡಿದರು. ಅದಕ್ಕೆ ಸ್ಪಂದಿಸಿದ ನ್ಯಾಯಾಧೀಶರು ಆರೋಪಿಗಳನ್ನು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

