Breaking News

ಮದುವೆಯಾದ ಕೆಲವೇ ದಿನಗಳಲ್ಲಿ ಪತ್ನಿ ಮೇಲೆ ಹಲ್ಲೆ ಮಾಡಿ ತಲಾಖ್ ಹೇಳಿದ ಪತಿ.!

ಬೆಂಗಳೂರು: ಮದುವೆಯಾದ ಕೆಲವೇ ದಿನಗಳಲ್ಲಿ ಪತಿಯಿಂದ ದೈಹಿಕ, ಮಾನಸಿಕ ಕಿರುಕುಳ ಅನುಭವಿಸಿ, ಬಳಿಕ ತಲಾಖ್ ಹೇಳಿ ಮನೆಯಿಂದ ಹೊರಹಾಕಲಾಗಿದೆ ಎಂದು ಯುವತಿಯೊಬ್ಬರು ಆರೋಪಿಸಿದ್ದಾರೆ. ವರದಕ್ಷಿಣೆ ಕಿರುಕುಳ, ಹಲ್ಲೆ ಹಾಗೂ ಬೆದರಿಕೆ ಸೇರಿದಂತೆ ಹಲವು ಆರೋಪಗಳನ್ನು ಕುಟುಂಬ ಮಾಡಿದೆ. ಪತಿ ಮತ್ತೊಬ್ಬ ಮಹಿಳೆಯೊಂದಿಗೆ ಸಂಪರ್ಕ ಹೊಂದಿದ್ದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಈ ವೇಳೆ ಪತ್ನಿಯ ಮೇಲೆ ಹಲ್ಲೆ ನಡೆಸಿ ಕಾಲಿಗೆ ಬಿಸಿನೀರು ಸುರಿಸಲಾಗಿದೆ ಎಂದು ಕುಟುಂಬ ಆರೋಪಿಸಿದೆ. ಬಳಿಕ ಮನೆಯಲ್ಲೇ ತಲಾಖ್ ಹೇಳಿ ಹೊರಹಾಕಲಾಗಿದೆ ಎನ್ನಲಾಗಿದೆ. ಪ್ರಕರಣದ ಹಿಂದೆ ಸಚಿವ ಜಮೀರ್ ಅಹಮದ್ ಅವರ ಪಿಎ ಮಹ್ಮದ್ ಅಯೂಬ್ ಪಾಷಾ ಅವರ ಪ್ರಭಾವವಿದೆ ಎಂಬ ಆರೋಪವೂ ಕೇಳಿಬಂದಿದೆ. ಇನ್ನು ಎಫ್‌ಐಆರ್ ದಾಖಲಿಸಲು ಸೌತ್ ಈಸ್ಟ್ ಮಹಿಳಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ನಂಜೇಗೌಡ ಅವರು ₹3 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಕುಟುಂಬ ಆರೋಪಿಸಿದೆ. ಈಗಾಗಲೇ ₹1.2 ಲಕ್ಷ ನೀಡಿದ್ದು, ನಗದು ರೂಪದಲ್ಲೇ ಹಣ ನೀಡುವಂತೆ ಸೂಚಿಸಲಾಗಿತ್ತು ಎನ್ನಲಾಗಿದೆ. ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕುಟುಂಬ ಆಗ್ರಹಿಸಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *