ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮಡಿಕೇರಿಗೆ ತೆರಳುತ್ತಿದ್ದ ಸುಮಾರು 30 ಮಂದಿ ಬಾಂಗ್ಲಾದೇಶದವರು ಎಂಬ ಅನುಮಾನದಿಂದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಸ್ ತಡೆದು ಪ್ರತಿಭಟನೆ ನಡೆಸಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಯಾಣಿಕರನ್ನು ಪರಿಶೀಲಿಸಿದರು. ಪೊಲೀಸರ ವಿಚಾರಣೆಯಲ್ಲಿ ಬಹುತೇಕರು ಅಸ್ಸೋಂ ಮೂಲದವರಾಗಿದ್ದು, ಮಡಿಕೇರಿಯ ಕಾಫಿ ತೋಟಗಳಲ್ಲಿ ಕೆಲಸ ಮಾಡಲು ತೆರಳುತ್ತಿದ್ದರು ಎಂಬುದು ತಿಳಿದುಬಂದಿದೆ. ತಂಡದಲ್ಲಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನೂ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲರ ಮೊಬೈಲ್ ಸಂಖ್ಯೆ ಹಾಗೂ ದಾಖಲೆಗಳನ್ನು ಪೊಲೀಸರು ಸಂಗ್ರಹಿಸಿ ಪರಿಶೀಲಿಸಿದ್ದು, ಯಾರೂ ಬಾಂಗ್ಲಾದೇಶದವರು ಅಲ್ಲ ಎಂಬುದು ದೃಢಪಟ್ಟಿದೆ. ಈ ಸಂಬಂಧ ಮಂಡ್ಯ ಪಶ್ಚಿಮ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

