Breaking News

ಪತ್ನಿ ಮೇಲಿನ ಅನುಮಾನಕ್ಕೆ ಜಿಲೆಟಿನ್ ಸ್ಫೋಟ: ತಂದೆ-ಮಗಳು ಸ್ಥಳದಲ್ಲೇ ಸಾವು

ಕಲಬುರಗಿ: ಪತ್ನಿ ಮೇಲಿನ ಅನುಮಾನಕ್ಕೆ ವ್ಯಕ್ತಿಯೊಬ್ಬ ಮನೆಯೊಳಗೆ ಜಿಲೆಟಿನ್ ಕಡ್ಡಿ ಸ್ಫೋಟಿಸಿದ ಪರಿಣಾಮ ತಂದೆ-ಮಗಳು ಮೃತಪಟ್ಟಿರುವ ದಾರುಣ ಘಟನೆ ಆಳಂದ ತಾಲೂಕಿನ ಮಟಕಿ ತಾಂಡದಲ್ಲಿ ನಡೆದಿದೆ. ಮೃತರನ್ನು ಶಿವಲಾಲ್ ಬಳಿರಾಮ್ ರಾಠೋಡ್ (50) ಹಾಗೂ ಅವರ ಪುತ್ರಿ ಮೀರಾ (15) ಎಂದು ಗುರುತಿಸಲಾಗಿದೆ. ಕಲ್ಲು ಕ್ವಾರಿಯಲ್ಲಿ ಕೆಲಸ ಮಾಡುತ್ತಿದ್ದ ಶಿವಲಾಲ್ ಅಲ್ಲಿಂದ ಜಿಲೆಟಿನ್ ಕಡ್ಡಿ ತಂದು, ಪತ್ನಿ ಹಾಗೂ ಕುಟುಂಬದವರನ್ನು ಕೊಲ್ಲುವುದಾಗಿ ಬೆದರಿಸಿ ಬಳಿಕ ಸ್ಫೋಟಿಸಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಶಿವಲಾಲ್ ಹಾಗೂ ಮೀರಾ ಮೃತಪಟ್ಟಿದ್ದು, ಪತ್ನಿ ಸವಿತಾ ಸೇರಿದಂತೆ ಪ್ರಕಾಶ್, ಸುರೇಖಾ ಹಾಗೂ ವಿವೇಕ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಳಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *