Breaking News

ಕೊರ್ದಬ್ಬು ದೈವಸ್ಥಾನದ ಕಾಣಿಕೆ ಹುಂಡಿ ಕಳವು – ಆರೋಪಿ ಬಂಧನ

ಮಂಗಳೂರು: ಸುರತ್ಕಲ್ ಸಮೀಪದ ಮಧ್ಯ ಕೊಡಿಪಾಡಿಯ ಕೊರ್ದಬ್ಬು ದೈವಸ್ಥಾನದಲ್ಲಿ ನಡೆದಿದ್ದ ಕಾಣಿಕೆ ಹುಂಡಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸುರತ್ಕಲ್ ಪೊಲೀಸರು ಆರೋಪಿ ಸುಖೇಶ್ ನಾಯ್ಕ್ (40)ನನ್ನು ಬಂಧಿಸಿದ್ದಾರೆ. ಆ.5ರಂದು ಬೆಳಗಿನ ಜಾವ ದೈವಸ್ಥಾನಕ್ಕೆ ನುಗ್ಗಿದ್ದ ಆರೋಪಿ, ಕಬ್ಬಿಣದ ಆಯುಧದಿಂದ ಬಾಗಿಲು ಹಾಗೂ ಕಿಟಕಿ ಮುರಿದು ಕಾಣಿಕೆ ಹುಂಡಿ ಕಳವು ಮಾಡಿದ್ದ. ಹುಂಡಿಯಲ್ಲಿದ್ದ ಸುಮಾರು ₹15 ಸಾವಿರ ನಗದನ್ನು ದೋಚಿಕೊಂಡು ಪರಾರಿಯಾಗಿದ್ದ. ಖಚಿತ ಮಾಹಿತಿ ಮೇರೆಗೆ ಆ.10ರಂದು ಸುರತ್ಕಲ್ ರೈಲ್ವೆ ನಿಲ್ದಾಣದಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ವಿಚಾರಣೆ ವೇಳೆ ಆರೋಪಿಯ ವಿರುದ್ಧ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ 18 ಕಳವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಒಂದು ಪ್ರಕರಣದಲ್ಲಿ ಶಿಕ್ಷೆಯೂ ಆಗಿದ್ದು, ವಿವಿಧ ಠಾಣೆಗಳಿಂದ ಆತನ ವಿರುದ್ಧ ನ್ಯಾಯಾಲಯದ ಬಂಧನ ವಾರಂಟ್‌ಗಳು ಬಾಕಿ ಇರುವುದು ಪತ್ತೆಯಾಗಿದೆ. ಬಂಧಿತ ಆರೋಪಿಯನ್ನು ಆ.11ರಂದು ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *