Breaking News

ಒಂದೇ ಜಾಗ.. ಒಂದೇ ವಾರದಲ್ಲಿ ಕೃಷ್ಣ ನದಿಗೆ ಬಿದ್ದ ಮೂರು ಕಾರುಗಳು.. ಬಾಗಲಕೋಟೆಯ ಈ ಜಾಗದಲ್ಲಿ ಏನೋ ಸಮಸ್ಯೆ..

ಬೀಳಗಿ ತಾಲೂಕಿನ ಗಲಗಲಿ–ರಬಕವಿ ರಸ್ತೆಯಲ್ಲಿ ಅವೈಜ್ಞಾನಿಕ ಕಾಮಗಾರಿಯಿಂದಾಗಿ ವಾಹನ ಸವಾರರು ಆತಂಕದಲ್ಲಿ ಸಂಚರಿಸುವಂತಾಗಿದೆ. ಕಳೆದ ಒಂದು ವಾರದಲ್ಲೇ ಮೂರು ಕಾರುಗಳು ಕೃಷ್ಣಾ ನದಿಗೆ ಬಿದ್ದಿದ್ದು, ಓರ್ವ ಬೈಕ್ ಸವಾರ ಕೂಡ ಗಾಯಗೊಂಡಿದ್ದಾರೆ. ಇಂದು ಕೋಲೂರು ಗ್ರಾಮದ ಈರಣ್ಣ ಅಂಬಿಗೇರ ಅವರ ಕಾರು ರಸ್ತೆಯಲ್ಲಿದ್ದ ಜಲ್ಲಿಕಲ್ಲಿನಿಂದ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಈರಣ್ಣ ಕಾರಿನ ಡೋರ್ ಒದ್ದು ಹೊರಬಂದು, ಸ್ಥಳೀಯ ಮೀನುಗಾರರು ಹಾಗೂ ಸಾರ್ವಜನಿಕರ ನೆರವಿನಿಂದ ಪಾರಾಗಿದ್ದಾರೆ. ಬಳಿಕ ಜೆಸಿಬಿ ಮೂಲಕ ಕಾರನ್ನು ಹೊರತೆಗೆಯಲಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿರುವ ಬಗ್ಗೆ ಯಾವುದೇ ಎಚ್ಚರಿಕೆ ಫಲಕ ಅಳವಡಿಸಿಲ್ಲ ಹಾಗೂ ಜಲ್ಲಿಕಲ್ಲನ್ನು ಸಮತಟ್ಟಾಗಿ ಹಾಕಿಲ್ಲ ಎಂಬ ಆರೋಪ ಕೇಳಿಬಂದಿದೆ. ಕೂಡಲೇ ರಸ್ತೆ ಸರಿಪಡಿಸಿ, ಸೂಚನಾ ಫಲಕ ಅಳವಡಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಧಿಕಾರಿಗಳು ನಿರ್ಲಕ್ಷ್ಯ ಮುಂದುವರಿಸಿದರೆ ಮತ್ತಷ್ಟು ಅನಾಹುತ ಸಂಭವಿಸುವ ಸಾಧ್ಯತೆ ಇದೆ ಎಂದು ಎಚ್ಚರಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *