ಮಂಗಳೂರಿನಲ್ಲಿ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಶದಲ್ಲಿದ್ದಾಗ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಪ್ರಮುಖ ಆರೋಪಿ ಅಲ್ತಾಫ್ ಹುಸೈನ್‌ನನ್ನು ಮಂಗಳೂರು ದಕ್ಷಿಣ ಠಾಣೆ ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ. ಜೂ.14ರಂದು ಸೂಟರ್‌ಪೇಟೆಯಲ್ಲಿ ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಬೈಕ್‌ನಲ್ಲಿ ಪರಾರಿಯಾಗಿದ್ದ ಪ್ರಕರಣದಲ್ಲಿ ಅಲ್ತಾಫ್ ಸೇರಿ ಮೂವರನ್ನು ಜೂ.26ರಂದು ಪೊಲೀಸರು ವಶಕ್ಕೆ ಪಡೆದಿದ್ದರು. ಠಾಣೆಗೆ ಕರೆತರುತ್ತಿದ್ದ ವೇಳೆ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಅಲ್ತಾಫ್ ಪರಾರಿಯಾಗಿದ್ದ. ಘಟನೆಯಲ್ಲಿ ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದವು. ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ವಿಜಯಪುರದಲ್ಲಿರುವ ಮಾಹಿತಿ ಆಧರಿಸಿ ಆ.10ರಂದು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ. ಅಲ್ತಾಫ್ ವಿರುದ್ಧ ರಾಜ್ಯದ ವಿವಿಧೆಡೆ ಒಟ್ಟು 6 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

