Breaking News

ಮುದರಂಗಡಿ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣ: ಕೃತ್ಯಕ್ಕಾಗಿ ಹಣ ವರ್ಗಾವಣೆಗೆ ಸಹಕರಿಸಿದ ಮತ್ತಿಬ್ಬರು ಆರೋಪಿಗಳ ಸೆರೆ

ಉಡುಪಿ: ಮುದರಂಗಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಎರ್ಮಾಳ್ ತೆಂಕ ಪಂಚಾಯತ್ ಕಛೇರಿ ಬಳಿಯ ನಿವಾಸಿಗಳಾದ ಚಿರಾಗ್ ಪೂಜಾರಿ(26) ಹಾಗೂ ಮೊಹಮ್ಮದ್ ಇರ್ಷಾದ್(43) ಬಂಧಿತ ಆರೋಪಿಗಳು. ಈ ಪ್ರಕರಣದಲ್ಲಿ ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಹೆಚ್ಚಿನ ತನಿಖೆ ನಡೆಸಿದಾಗ ಚಿರಾಗ್ ಪೂಜಾರಿ ಹಾಗೂ ಮೊಹಮ್ಮದ್ ಇರ್ಷಾದ್ ಎಂಬವರು ಕೃತ್ಯ ನಡೆಸಲು ಹಣ ವರ್ಗಾವಣೆ ಮಾಡಲು ಸಹಾಯ ಮಾಡಿರುವುದು ಕಂಡುಬಂದಿದೆ. ಅದರಂತೆ ಇವರಿಬ್ಬರನ್ನು ಆ.12ರಂದು ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೇರಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *