Breaking News

ಬೆಂಗಳೂರು : 350 ಕ್ಕೂ ಹೆಚ್ಚು ಎಲೆಕ್ಟ್ರಿಕ್‌ ದ್ವಿಚಕ್ರ ವಾಹನಗಳು ಅಗ್ನಿಗಾಹುತಿ

ಬೆಂಗಳೂರು, ಆ.12: ರಾಮಮೂರ್ತಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಎನ್‌ಆರ್‌ಐ ಲೇಔಟ್‌ನ ಖಾಲಿ ಜಾಗದಲ್ಲಿ ನಿಲುಗಡೆ ಮಾಡಲಾಗಿದ್ದ 350ಕ್ಕೂ ಹೆಚ್ಚು ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಬೆಂಕಿಗಾಹುತಿಯಾಗಿವೆ. ಇಲ್ಲಿ ಸುಮಾರು 500ಕ್ಕೂ ಹೆಚ್ಚು ಇವಿ ವಾಹನಗಳನ್ನು ಡೆಲಿವರಿ ಸಿಬ್ಬಂದಿಗೆ ದಿನದ ಬಾಡಿಗೆ ಆಧಾರದ ಮೇಲೆ ನೀಡಲಾಗುತ್ತಿತ್ತು. ನಿನ್ನೆ ರಾತ್ರಿ 8.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಅಕ್ಕಪಕ್ಕದ ವಾಹನಗಳಿಗೂ ವ್ಯಾಪಿಸಿದೆ. ಅಗ್ನಿಶಾಮಕ ಸಿಬ್ಬಂದಿ ಎರಡು ವಾಹನಗಳೊಂದಿಗೆ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಗೆ ಇವಿ ಬ್ಯಾಟರಿಯಿಂದ ಕಿಡಿ ಹೊತ್ತಿಕೊಂಡಿರುವ ಸಾಧ್ಯತೆಯ ಜೊತೆಗೆ, ಯಾರಾದರೂ ಕಿಡಿಗೇಡಿಗಳು ಕೃತ್ಯ ಎಸಗಿರುವ ಬಗ್ಗೆಯೂ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

1 ಲಕ್ಷ ರೂ. ಲಂಚ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಗ್ನಿಶಾಮಕ ಅಧಿಕಾರಿ

ಶಿವಮೊಗ್ಗ: ಶಾಲೆಯ ಹೊಸ ಕಟ್ಟಡಕ್ಕೆ ಅಗ್ನಿಶಾಮಕ ದಳದ ಎನ್‌ಒಸಿ ನೀಡಲು ₹1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಜಿಲ್ಲಾ ಅಗ್ನಿಶಾಮಕ …

Leave a Reply

Your email address will not be published. Required fields are marked *