Breaking News

ಗಾಂಜಾ ಸೇವಿಸಿ ಚಾಕು ಹಿಡಿದು ಗಲಾಟೆ; ಯುವಕನ ಬಂಧನ

ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ ಆರೋಪದ ಮೇಲೆ 22 ವರ್ಷದ ಮಹಮ್ಮದ್ ಅಫ್ಷಾನ್ ಎಂಬ ಯುವಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಲ್ಲಹಳ್ಳಿ ಗ್ರಾಮದ ಮೈಸೂರು ರಸ್ತೆ–ರಾಜ್‌ಕುಮಾರ್ ರಸ್ತೆ ಜಂಕ್ಷನ್ ಬಳಿ ಯುವಕನೊಬ್ಬ ಚಾಕು ಹಿಡಿದು ಗಲಾಟೆ ಮಾಡುತ್ತಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಸ್ಥಳಕ್ಕೆ ತೆರಳಿದ ಪೊಲೀಸರು, ಸಾರ್ವಜನಿಕರಿಗೆ ಅವಾಚ್ಯವಾಗಿ ಬೈದು ಚಾಕು ತೋರಿಸಿ ಬೆದರಿಸುತ್ತಿದ್ದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆ ವೇಳೆ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದು, ವೈದ್ಯಕೀಯ ಪರೀಕ್ಷೆಯಲ್ಲೂ ಗಾಂಜಾ ಸೇವನೆ ದೃಢಪಟ್ಟಿದೆ. ಈ ಸಂಬಂಧ ಹುಲ್ಲಹಳ್ಳಿ ಠಾಣೆಯಲ್ಲಿ NDPS ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *