Breaking News

ಚರ್ಚ್, ದೇವಸ್ಥಾನದ ವಿಚಾರವಾಗಿ ಜಗಳ: 15 ಮಂದಿಗೆ ಗಾಯ, 20 ಮಂದಿ ವಿರುದ್ಧ ಎಫ್ ಐಆರ್

ರಾಯಚೂರು: ದೇವಸ್ಥಾನ ಹಾಗೂ ಚರ್ಚ್ ವಿಚಾರವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಸುಮಾರು 15 ಮಂದಿ ಗಾಯಗೊಂಡಿರುವ ಘಟನೆ ರಾಯಚೂರು ತಾಲೂಕಿನ ಗಿಲ್ಲೆಸುಗೂರು ಕ್ಯಾಂಪ್‌ನಲ್ಲಿ ನಡೆದಿದೆ. ಈ ಸಂಬಂಧ 20 ಮಂದಿಯ ವಿರುದ್ಧ ಇಡಪನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುನರ್ವಸತಿ ಪ್ರದೇಶದಲ್ಲಿರುವ ಚರ್ಚ್ ಮತ್ತು ಆಂಜನೇಯ ದೇವಸ್ಥಾನದ ವಿಚಾರವಾಗಿ ಕಳೆದ ಎರಡು ತಿಂಗಳಿಂದ ವಿವಾದ ನಡೆಯುತ್ತಿತ್ತು. ಜಿಲ್ಲಾಧಿಕಾರಿ, ತಹಶೀಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ಈ ಹಿಂದೆ ಸಂಧಾನ ನಡೆಸಲಾಗಿದ್ದರೂ, ಮಂಗಳವಾರ ಮತ್ತೆ ಗಲಾಟೆ ನಡೆದಿದೆ. ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಎರಡು ಗುಂಪುಗಳು ಪರಸ್ಪರ ಕಲ್ಲು ತೂರಾಟ ನಡೆಸಿವೆ. ಕಲ್ಲು ತೂರಾಟದಲ್ಲಿ ತೀವ್ರವಾಗಿ ಗಾಯಗೊಂಡ ಇಬ್ಬರನ್ನು ರಾಯಚೂರಿನ ಒಪೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಬಿಚ್ಚಾಲಿ ಗ್ರಾಮ ಹಾಗೂ ಬಿಚ್ಚಾಲಿ ಕ್ಯಾಂಪ್ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಏಳು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *