ಕೋಲಾರ: ಭೀಮನ ಅಮಾವಾಸ್ಯೆಯಂದು ಪತಿಯನ್ನೇ ಕೊಲೆ ಮಾಡಿದ ಆರೋಪದ ಮೇಲೆ ಜಗದಾಂಭ (58) ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತರನ್ನು ನಾರಾಯಣಸ್ವಾಮಿ (68) ಎಂದು ಗುರುತಿಸಲಾಗಿದೆ. ಹಣದ ವಿಚಾರವಾಗಿ ಪತಿಯನ್ನು ತೋಟದ ಮನೆಗೆ ಕರೆಸಿಕೊಂಡಿದ್ದ ಜಗದಾಂಭ, ರಾತ್ರಿ ಊಟದಲ್ಲಿ 10 ನಿದ್ರೆ ಮಾತ್ರೆ ಬೆರೆಸಿ ನೀಡಿದ್ದಾಳೆ ಎನ್ನಲಾಗಿದೆ. ನಿದ್ರೆಗೆ ಜಾರಿದ ಬಳಿಕ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಕೊಲೆ ಬಳಿಕ ಜಗದಾಂಭ ಸ್ವತಃ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾಳೆ. ಜಮೀನು ಮಾರಾಟದ ಹಣದ ವಿಚಾರವಾಗಿ ಕೊಲೆ ಮಾಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾಳೆ ಎನ್ನಲಾಗಿದೆ. ವೇಮಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

