Breaking News

ಪಿಗ್ಮಿ ಏಜೆಂಟ್ ಕೊಲೆ ಪ್ರಕರಣ, ಇಬ್ಬರ ಹೆಡೆಮುರಿ ಕಟ್ಟಿದ ಪೊಲೀಸರು

ವಿಜಯಪುರ: ಪಿಗ್ಮಿ ಏಜೆಂಟ್‌ ಶರಣಬಸಪ್ಪ ಮಲ್ಲೇಶಪ್ಪ ಜೇವರ್ಗಿ (43) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಳಗುಮ್ಮಟ ಠಾಣೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಆ.7ರಂದು ಮುಬಾರಕ್‌ ಚೌಕ್‌ ಬಳಿ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ಶರಣಬಸಪ್ಪ ಮೇಲೆ ಹರಿತವಾದ ಆಯುಧದಿಂದ ದಾಳಿ ನಡೆಸಲಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಸರ್ಫರಾಜ್‌ ಸಿಕಂದರ್‌ ಶೇಖ (35) ಹಾಗೂ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅನೈತಿಕ ಸಂಬಂಧದ ಸಂಶಯವೇ ಕೊಲೆಗೆ ಕಾರಣವೆಂದು ತನಿಖೆಯಿಂದ ತಿಳಿದುಬಂದಿದೆ. ಕೃತ್ಯಕ್ಕೆ ಬಳಸಿದ್ದ ಕೊಡಲಿ ಹಾಗೂ ಮೋಟಾರ್‌ಸೈಕಲ್‌ ವಶಪಡಿಸಿಕೊಂಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿಎಸ್‌ಪಿ ನಾಗರಾಜ್‌ ಜೆ. ಮಾರ್ಗದರ್ಶನದಲ್ಲಿ 12 ಸಿಬ್ಬಂದಿಯ ವಿಶೇಷ ತನಿಖಾ ತಂಡ ಪ್ರಕರಣ ಭೇದಿಸಿದೆ ಎಂದು ಎಸ್‌ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *