Breaking News

ತಂದೆಯನ್ನೇ ಕೊಂದು ಮೃತದೇಹ ಬಾವಿಗೆ ಎಸೆದ ಪುತ್ರ

ಶಿವಮೊಗ್ಗ: ಸಾಗರ ತಾಲೂಕಿನ ಬ್ಯಾಕೋಡು ಸಮೀಪದ ಗೊರಗೋಡು ಗ್ರಾಮದಲ್ಲಿ ತಂದೆಯನ್ನೇ ಮಗ ಕೊಲೆ ಮಾಡಿ, ಮೃತದೇಹವನ್ನು ಬಾವಿಗೆ ಎಸೆದಿರುವ ಘಟನೆ ನಡೆದಿದೆ. ಸುಬ್ರಾಯ (55) ಮೃತರು. ಮಗ ಜಯಂತ್‌ ಆರೋಪಿಯಾಗಿದ್ದು, ಜಗಳದ ವೇಳೆ ಕೈ ಹಾಗೂ ಕೋಲಿನಿಂದ ಹೊಡೆದು ತಂದೆಯನ್ನು ಕೊಲೆ ಮಾಡಿದ್ದಾನೆ. ಸುಬ್ರಾಯ ಅವರು 2010ರಲ್ಲಿ ತನ್ನ ತಂದೆ ಹಾಗೂ ತಂಗಿಯನ್ನು ಕೊಲೆ ಮಾಡಿ 14 ವರ್ಷ ಜೈಲು ಶಿಕ್ಷೆ ಅನುಭವಿಸಿ 2023ರಲ್ಲಿ ಬಿಡುಗಡೆಯಾಗಿದ್ದರು. ಬಳಿಕ ಪತ್ನಿಯನ್ನು ಕೊಲೆ ಮಾಡಲು ಯತ್ನಿಸಿದ ಆರೋಪದಲ್ಲಿ ಮತ್ತೆ ಜೈಲು ಸೇರಿ, ಕಳೆದ ಮೇ ತಿಂಗಳಲ್ಲಿ ಬಿಡುಗಡೆಯಾಗಿದ್ದರು. ಐದು ದಿನಗಳ ಹಿಂದೆ ಊರಿಗೆ ಬಂದಿದ್ದ ವೇಳೆ ಮಗನೊಂದಿಗೆ ಜಗಳವಾಗಿ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡ ಕಾರ್ಗಲ್ ಠಾಣೆ ಪೊಲೀಸರು ಆರೋಪಿ ಜಯಂತ್‌ನನ್ನು ಬಂಧಿಸಿದ್ದಾರೆ. ಎಸ್ಪಿ ನಿಖಿಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *