Breaking News

ಕರ್ನಾಟಕ ಬಂದ್‌ಗೆ ಕರೆ: ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ

ಬೆಂಗಳೂರು: ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಡಾಲರ್ಸ್ ಕಾಲೋನಿ ನಿವಾಸದಿಂದ ಹೊರಬರುತ್ತಿದ್ದ ವೇಳೆ ಸದಾಶಿವನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೆಜೆಸ್ಟಿಕ್‌ಗೆ ತೆರಳಿ ಪ್ರತಿಭಟನೆ ನಡೆಸಲು ಅವರು ಸಜ್ಜಾಗಿದ್ದರು. ಬಾಯಿಗೆ ಟೇಪ್ ಅಂಟಿಸಿಕೊಂಡು ಮೌನ ಪ್ರತಿಭಟನೆ ನಡೆಸಲು ವಾಟಾಳ್ ನಾಗರಾಜ್ ಸಿದ್ಧರಾಗಿದ್ದರು. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದ್ದಾರೆ. ಆ.13ರಂದು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖ ಕನ್ನಡ ಸಂಘಟನೆಗಳು ಹಾಗೂ ಸಾರಿಗೆ ಒಕ್ಕೂಟಗಳು ಬೆಂಬಲಿಸದ ಹಿನ್ನೆಲೆಯಲ್ಲಿ ಜನಜೀವನ ಬಹುತೇಕ ಸಹಜವಾಗಿತ್ತು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *