Breaking News

8 ಲಕ್ಷ ರೂ. ಲಾಟರಿ ಹೊಡೆದಿದೆ ಎಂದು ನಂಬಿಸಿ ಮಹಿಳೆಗೆ 2.34 ಲಕ್ಷ ವಂಚನೆ

ಚಿಕ್ಕಮಗಳೂರು, ಆ.13- ಕೇರಳ ಲಾಟರಿಯಲ್ಲಿ ₹8 ಲಕ್ಷ ಬಹುಮಾನ ಬಂದಿದೆ ಎಂದು ನಂಬಿಸಿ ಮಹಿಳೆಯೊಬ್ಬರಿಂದ ₹2.34 ಲಕ್ಷಕ್ಕೂ ಅಧಿಕ ಹಣ ವಂಚಿಸಿರುವ ಘಟನೆ ನಗರದಲ್ಲಿ ನಡೆದಿದೆ. ಸೀಮಾ ಬಾನು ವಂಚನೆಗೊಳಗಾದವರು. ಅಪರಿಚಿತ ವ್ಯಕ್ತಿಗಳು ಕರೆ ಮಾಡಿ ಲಾಟರಿ ಬಹುಮಾನ ಬಂದಿದೆ ಎಂದು ನಂಬಿಸಿ, ಪ್ರೊಸೆಸಿಂಗ್‌ ಶುಲ್ಕ, ಜಿಎಸ್‌ಟಿ, ಟಿಡಿಎಸ್‌ ಹಾಗೂ ಆರ್‌ಬಿಐ ಶುಲ್ಕದ ಹೆಸರಿನಲ್ಲಿ ಹಂತ ಹಂತವಾಗಿ ಹಣ ಪಾವತಿಸುವಂತೆ ತಿಳಿಸಿದ್ದಾರೆ. ಇದನ್ನು ನಂಬಿದ ಸೀಮಾ ಬಾನು ಒಟ್ಟು ₹2,34,200 ವರ್ಗಾಯಿಸಿದ್ದಾರೆ. ಬಹುಮಾನ ಹಣ ಜಮೆಯಾಗದೆ ಮತ್ತಷ್ಟು ₹1 ಲಕ್ಷಕ್ಕೆ ಬೇಡಿಕೆ ಇಟ್ಟಾಗ ವಂಚನೆ ಬೆಳಕಿಗೆ ಬಂದಿದೆ. ಈ ಕುರಿತು 1930ಕ್ಕೆ ಕರೆ ಮಾಡಿ ದೂರು ನೀಡಿದ್ದು, ಸೈಬರ್‌ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *